ಜನವರಿ 17–18 ರಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
ಶಿವಮೊಗ್ಗ, 10 ಜನವರಿ (ಹಿ.ಸ.) : ಆ್ಯಂಕರ್ : ಜನವರಿ 17 ಮತ್ತು 18ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ನೌಕರರ
ಜನವರಿ 17–18 ರಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ


ಶಿವಮೊಗ್ಗ, 10 ಜನವರಿ (ಹಿ.ಸ.) :

ಆ್ಯಂಕರ್ : ಜನವರಿ 17 ಮತ್ತು 18ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ನೌಕರರ ಸಂಘ ಜಿಲ್ಲಾ ಅಧ್ಯಕ್ಷ ಆರ್. ಮೋಹನ್‌ಕುಮಾರ್ ತಿಳಿಸಿದ್ದಾರೆ.

3000ಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದು, 2 ದಿನಗಳ ವಿಶೇಷ ರಜೆ ಮತ್ತು ಊಟೋಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಪುಟ್ಬಾಲ್, ಹಾಕಿ, ಕಬ್ಬಡ್ಡಿ, ಕ್ರಿಕೆಟ್, ಬಾಸ್ಕೆಟ್‌ಬಾಲ್, ಷಟಲ್ ಬ್ಯಾಡ್ಮಿಂಟನ್, ಚೆಸ್, ಯೋಗ, ಓಟ ಸೇರಿದಂತೆ ಕ್ರೀಡೆಗಳು ನಡೆಯಲಿವೆ. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ, ಜಾನಪದ ಗೀತೆ ಮತ್ತು ಕಿರು ನಾಟಕಗಳ ಆಯೋಜಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande