
ಮಂಡ್ಯ, 10 ಜನವರಿ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆ, ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಸರಗಳ್ಳತನ ಹಾಗೂ ಹಗಲು–ರಾತ್ರಿ ಮನೆಗಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಾನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 253 ಗ್ರಾಂ ಚಿನ್ನ, 178 ಗ್ರಾಂ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಮತ್ತು ಆಕ್ಸಿಸ್ ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಲಿನ ಒಟ್ಟು ಮೌಲ್ಯ ₹31,98,100.
ದಿನಾಂಕ 28-06-2025ರಂದು ಸಂಜೆ 6.15ಕ್ಕೆ, ಪಿರ್ಯಾದಿದಾರರು ಗ್ರಾಮದ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ಆರೋಪಿಗಳು ಕತ್ತಿನಲ್ಲಿದ್ದ 35 ಗ್ರಾಂ ತೂಕದ ಎರಡು ಎಳೆಯ ಮಂಗಳ್ಯ ಸರವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಮೊ.ಸಂ. 61/2025, ಕಲಂ 309(4) BNS ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭಾರಾಣಿ, ಅವರ ಮಾರ್ಗದರ್ಶನದಲ್ಲಿ, ಅಪರ ಪೊಲೀಸ್ ಅಧೀಕ್ಷಕರು ತಿಮ್ಮಯ್ಯ ಸಿ.ಇ., ಗಂಗಾಧರಸ್ವಾಮಿ, ಮಳವಳ್ಳಿ ಉಪವಿಭಾಗದ ಡಿವೈಎಸ್‌ಪಿ ಯಶವಂತ್ ಕುಮಾರ್ ಎಸ್.ಬಿ., ಹಲಗೂರು ವೃತ್ತ ನಿರೀಕ್ಷಕ ಶ್ರೀಧರ್ ಬಿ.ಎಸ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ತನಿಖೆಯ ವೇಳೆ ದಿನಾಂಕ 01-01-2026ರಂದು ಆರೋಪಿಗಳನ್ನು ಮೈಸೂರಿನಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದ್ದು, ಇವರು ಬೇರೆ ಜಿಲ್ಲೆಗಳಲ್ಲಿಯೂ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ದೃಢಪಟ್ಟಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa