
ಬೆಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಒಳಾಡಳಿತ ಇಲಾಖೆಯ ಎಸಿಎಸ್ ತುಷಾರ ಗಿರಿನಾಥ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಇಲಾಖೆಯ ನಿರ್ದೇಶಕಿ ಅಂಜಲಿ ದೇವಿ, ಅಭಿಯೋಜನಾಧಿಕಾರಿಗಳ ಸಂಘದ ಅಧ್ಯಕ್ಷರಾದ ಅಶ್ವಥ್ ನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa