ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಕ್ತದಾನ ಶಿಬಿರ
ಶಿವಮೊಗ್ಗ, 11 ಜನವರಿ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ಹಾಗೂ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದ ಸಹಯೋಗದಲ್ಲಿ ವಿನೋಬನಗರ ಪೊಲೀಸ್ ಠಾಣಾ ಆವರಣದಲ್ಲಿ ಶನಿವಾರ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ 81ನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಈ ಶಿಬಿರದಲ್ಲಿ ಪೊಲೀಸ್
Blood donation


ಶಿವಮೊಗ್ಗ, 11 ಜನವರಿ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ಹಾಗೂ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದ ಸಹಯೋಗದಲ್ಲಿ ವಿನೋಬನಗರ ಪೊಲೀಸ್ ಠಾಣಾ ಆವರಣದಲ್ಲಿ ಶನಿವಾರ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ 81ನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಈ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು 14 ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ರಕ್ತದಾನದ ಮಹತ್ವದ ಕುರಿತು ಅರಿವು ಮೂಡಿಸುವ ಜೊತೆಗೆ ಸಮಾಜಮುಖಿ ಸೇವೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರದ ಯಶಸ್ಸಿಗೆ ವಿನೋಬನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದ ಸಿಬ್ಬಂದಿಗಳು ಸಹಕಾರ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande