
ಮದ್ದೂರು, 11 ಜನವರಿ (ಹಿ.ಸ.) :
ಆ್ಯಂಕರ್ : ಗೆಜ್ಜೆಲಗೆರೆ ಗ್ರಾಮ ಪಂಚಾಯ್ತಿಯನ್ನು ಮದ್ದೂರು ನಗರಸಭೆಗೆ ಸೇರಿಸಿರುವ ಕ್ರಮವನ್ನು ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಾಭಿಪ್ರಾಯವನ್ನು ಪರಿಗಣಿಸದೆ ಗ್ರಾಮ ಪಂಚಾಯ್ತಿಯನ್ನು ನಗರಸಭೆಗೆ ವಿಲೀನಗೊಳಿಸಿರುವುದು ಜನವಿರೋಧಿ ನಿರ್ಧಾರವಾಗಿದೆ. ಗ್ರಾಮೀಣ ಪ್ರದೇಶದ ಸ್ವರೂಪ, ಸಮಸ್ಯೆಗಳು ಹಾಗೂ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಧರಣಿ ಸತ್ಯಾಗ್ರಹದಲ್ಲಿ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಚಲವಾದಿ ಟಿ. ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಮುಖಂಡರಾದ ಎಸ್.ಪಿ. ಸ್ವಾಮಿಗೌಡ, ಇಂಡವಾಳು ಸಚ್ಚಿದಾನಂದ, ಅಶೋಕ್ ಜಯರಾಮ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa