
ಬೀದರ್, 11 ಜನವರಿ (ಹಿ.ಸ.) :
ಆ್ಯಂಕರ್ : ಬೀದರ್ ಜಿಲ್ಲೆಯ ಹುಮ್ಮಾಬಾದ್‌ನಲ್ಲಿ ಕರ್ನಾಟಕ ಮಾದರ ಮಹಾಸಭಾ (ರಿ) ವತಿಯಿಂದ ಆಯೋಜಿಸಲಾದ ಬೀದರ್ ಜಿಲ್ಲಾ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಇಂದು ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮುನಿಯಪ್ಪ, ಸಮಾಜದ ಸಂಘಟನೆ ಮತ್ತು ಬಲವರ್ಧನೆಯ ಮೂಲಕ ಸಮಾನತೆ ಹಾಗೂ ಸಾಮಾಜಿಕ ನ್ಯಾಯ ಸಾಧಿಸಲು ಸದಸ್ಯತ್ವ ಅಭಿಯಾನಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್. ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ವಿಜಯಕುಮಾರ್ ಕೌಡ್ಯಾಲ್ ಸೇರಿದಂತೆ ಸಮಾಜದ ಅನೇಕ ಗಣ್ಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa