ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕ ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ, 11 ಜನವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ.40ರ ಪಾಟೀಲ ಲೇಔಟ್‌ನಲ್ಲಿ ಶಾಸಕ ಮಹೇಶ್ ತೆಂಗಿನಕಾಯಿ ಅವರು ಸ್ಥಳೀಯ ನಿವಾಸಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕುಡಿಯುವ
Mla


ಹುಬ್ಬಳ್ಳಿ, 11 ಜನವರಿ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ.40ರ ಪಾಟೀಲ ಲೇಔಟ್‌ನಲ್ಲಿ ಶಾಸಕ ಮಹೇಶ್ ತೆಂಗಿನಕಾಯಿ ಅವರು ಸ್ಥಳೀಯ ನಿವಾಸಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಸಮಸ್ಯೆಗಳ ಬಗ್ಗೆ ನಾಗರಿಕರು ಶಾಸಕರ ಗಮನ ಸೆಳೆದರು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವುದಾಗಿ ಶಾಸಕ ಮಹೇಶ್ ತೆಂಗಿನಕಾಯಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಈಶ್ವರಗೌಡ ಪಾಟೀಲ, ಸಿದ್ದು ಮೊಗಲಿಶೆಟ್ಟರ, ಉದಯ ಬಾಡ್ಕರ ಸೇರಿದಂತೆ ಸ್ಥಳೀಯ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande