ಇರಾನ್ ಮೇಲೆ ಮಿಲಿಟರಿ ದಾಳಿ ಎಚ್ಚರಿಕೆ ನೀಡಿದ ಅಮೆರಿಕ
ವಾಷಿಂಗ್ಟನ್, 12 ಜನವರಿ (ಹಿ.ಸ.) : ಆ್ಯಂಕರ್ : ಇರಾನ್ ಎಲ್ಲ ಮಿತಿಗಳನ್ನು ಮೀರಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ತೀವ್ರವಾಗಿ ಆರೋಪಿಸಿದ್ದಾರೆ. ಅಮಾಯಕ ನಾಗರಿಕರ ಹತ್ಯೆಗಳು ನಡೆಯುತ್ತಿದ್ದು, ಇಂತಹ ಪರಿಸ್ಥಿತಿ ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ
Trump


ವಾಷಿಂಗ್ಟನ್, 12 ಜನವರಿ (ಹಿ.ಸ.) :

ಆ್ಯಂಕರ್ : ಇರಾನ್ ಎಲ್ಲ ಮಿತಿಗಳನ್ನು ಮೀರಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ತೀವ್ರವಾಗಿ ಆರೋಪಿಸಿದ್ದಾರೆ. ಅಮಾಯಕ ನಾಗರಿಕರ ಹತ್ಯೆಗಳು ನಡೆಯುತ್ತಿದ್ದು, ಇಂತಹ ಪರಿಸ್ಥಿತಿ ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ವಿರುದ್ಧ ಮಿಲಿಟರಿ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಸೇನೆ ಬಲವಾದ ಆಯ್ಕೆಗಳನ್ನು ಪರಿಗಣಿಸುತ್ತಿದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಇಂಟರ್‌ನ್ಯಾಷನಲ್ ವರದಿಯ ಪ್ರಕಾರ, ಟ್ರಂಪ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ,

“ಇರಾನ್ ಕುರಿತು ಅಮೆರಿಕ ಅತ್ಯಂತ ಗಂಭೀರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಅಲ್ಲಿನ ಆಡಳಿತವು ಎಲ್ಲಾ ಮಿತಿಗಳನ್ನು ದಾಟಿದೆ. ಈಗ ನಿರ್ಧಾರ ಕೈಗೊಳ್ಳುವ ಸಮಯ ಬಂದಿದೆ,” ಎಂದು ಹೇಳಿದರು. ಅಮಾಯಕ ನಾಗರಿಕರ ಹತ್ಯೆ ಯಾವತ್ತೂ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದ್ದಾರೆ.

ಇರಾನ್‌ನ ಸುಪ್ರೀಂ ಲೀಡರ್ ಅಲಿ ಖಮೇನಿ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, “ಇರಾನ್‌ನ ನಾಯಕರು ಹಿಂಸಾಚಾರದ ಮೂಲಕ ದೇಶವನ್ನು ಆಳುತ್ತಿದ್ದಾರೆ” ಎಂದು ಟ್ರಂಪ್ ಆರೋಪಿಸಿದರು. ಅಲ್ಲದೆ, ಇಸ್ಲಾಮಿಕ್ ಗಣರಾಜ್ಯವು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ಅವರು ಹೇಳಿದರು.

ಇರಾನ್ ಅಮೆರಿಕದ ಮೇಲೆ ದಾಳಿ ನಡೆಸಿದರೆ ಏನು ಕ್ರಮ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಟ್ರಂಪ್,

“ಇರಾನ್ ಹಾಗೆ ಮಾಡಿದರೆ, ಇದುವರೆಗೂ ಕಾಣದಷ್ಟು ಭಾರೀ ರೀತಿಯಲ್ಲಿ ದಾಳಿ ಎದುರಿಸಬೇಕಾಗುತ್ತದೆ,” ಎಂದು ಕಠಿಣ ಎಚ್ಚರಿಕೆ ನೀಡಿದರು.

ಇದರ ಜೊತೆಗೆ, ಇರಾನ್‌ನ ಪ್ರತಿಭಟನಾಕಾರರಿಗೆ ಇಂಟರ್ನೆಟ್ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಸ್ಟಾರ್‌ಲಿಂಕ್ ಸೇವೆಯನ್ನು ಸಕ್ರಿಯಗೊಳಿಸುವ ಬಗ್ಗೆ ಉದ್ಯಮಿ ಎಲೋನ್ ಮಸ್ಕ್ ಅವರೊಂದಿಗೆ ಮಾತನಾಡುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande