
ಹುಬ್ಬಳ್ಳಿ, 12 ಜನವರಿ (ಹಿ.ಸ.) :
ಆ್ಯಂಕರ್ : ಕೇಂದ್ರ ಪುರಸ್ಕೃತ ಅಮೃತ್-2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆಯಡಿ ಕಾರ್ಯಕ್ರಮದಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕ ಉದ್ಯಾನವನ ಹಾಗೂ ಆಟದ ಮೈದಾನ ನಿರ್ವಹಣೆ ಮಾಡಲು ಡೇ-ಎನ್ ಯುಎಲ್‍ಎಂ ಅಭಿಯಾನದಡಿ ಅರ್ಹ ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರವು ಅಮೃತ್ ಯೋಜನೆಯಡಿ ಅಮೃತ್ ಮಿತ್ರ ಹಂತ-2 ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದು, ಅಮೃತ್-2.0 ಅಭಿಯಾನದಡಿ ತಾಂತ್ರಿಕ ಮತ್ತು ತಾಂತ್ರಿಕೇತರ ಚಟುವಟಿಕೆಗಳನ್ನು ಕೇಂದ್ರ ಪುರಸ್ಕೃತ ಯೋಜನೆಯಾದ ಡೇ-ನಲ್ಮ್ ಅಭಿಯಾನದಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಮೂಲಕ ಸದರಿ ಚಟುವಟಿಕೆಗಳನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲು ಆಸಕ್ತಿ ಇರುವ ಮಹಿಳಾ ಸ್ವ-ಸಹಾಯ ಗುಂಪುಗಳು ಭಾಗವಹಿಸಬಹುದಾಗಿರುತ್ತದೆ.
ಆಸಕ್ತಿ ಇರುವ ಮಹಿಳಾ ಸ್ವ-ಸಹಾಯ ಗುಂಪುಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಡೇ-ನಲ್ಮ್ ಹುಬ್ಬಳ್ಳಿ ಹಾಗೂ ಧಾರವಾಡ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, 10 ದಿವಸಗಳೊಳಗಾಗಿ ಅರ್ಹ ಮತ್ತು ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳು ತಮ್ಮ ಪ್ರಸ್ತಾವನೆಯನ್ನು ಮುಚ್ಚಿದ ಲಕೋಟೆಯಲ್ಲಿ ಸೀಲು ಮಾಡಿ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿ ರವರಿಗೆ ಸಲ್ಲಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa