
ಬೆಂಗಳೂರು, 12 ಜನವರಿ (ಹಿ.ಸ.) :
ಆ್ಯಂಕರ್ : ಬಿಜೆಪಿ ಪಕ್ಷದ ಜಿಲ್ಲಾವಾರು ಪದಾಧಿಕಾರಿಗಳ ಸಭೆಗಳು ಇಂದೂ ಮುಂದುವರೆದಿವೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಯಚೂರು, ಮಂಗಳೂರು, ಉಡುಪಿ, ಕೊಡಗು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವರು ವಿಷಯಗಳ ಕುರಿತಂತೆ ಚರ್ಚಿಸಿದರು.
ಸಂಘಟನೆಯ ಬಲವರ್ಧನೆ ಮತ್ತು ಮುಂಬರುವ ಚುನಾವಣಾ ಸವಾಲುಗಳ ಕುರಿತಂತೆ ವಿಸ್ತೃತ ಸಮಾಲೋಚನೆಗಳನ್ನು ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa