ಕೋಗಿಲು ; ಬಿಜೆಪಿ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಕೆ
ಬೆಂಗಳೂರು, 12 ಜನವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ಬಿಜೆಪಿ ರಚಿಸಿದ್ದ ಪಕ್ಷದ ಸತ್ಯ ಶೋಧನಾ ಸಮಿತಿ ಇಂದು ವರದಿಯನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಲ್ಲಿಸಿತು. ಶಾಸಕರಾದ ಎಸ್.ಆರ್. ವಿಶ್ವನಾಥ್ ನೇತೃತ್ವದ ಸ
Report


ಬೆಂಗಳೂರು, 12 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ಬಿಜೆಪಿ ರಚಿಸಿದ್ದ ಪಕ್ಷದ ಸತ್ಯ ಶೋಧನಾ ಸಮಿತಿ ಇಂದು ವರದಿಯನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಲ್ಲಿಸಿತು.

ಶಾಸಕರಾದ ಎಸ್.ಆರ್. ವಿಶ್ವನಾಥ್ ನೇತೃತ್ವದ ಸತ್ಯಶೋಧನ ತಂಡ ಸ್ಥಳಕ್ಕೆ ಭೇಟಿ ನೀಡಿ, ವ್ಯಾಪಕವಾಗಿ ಮಾಹಿತಿ ಕಲೆ ಹಾಕಿ, ಸದರಿ ಜಾಗದ ಸಂಪೂರ್ಣ ವಿವರ, ಸರ್ವೇ ನಂಬರ್, ಗೂಗಲ್ ಮ್ಯಾಪ್, ಕಾನೂನುಗಳು ಸೇರಿದಂತೆ ಸಮಗ್ರ ವಿವರವನ್ನು ಒಳಗೊಂಡ ವರದಿಯನ್ನು ಸಲ್ಲಿಸಿದೆ.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಶಾಸಕ ಎಸ್.ಮುನಿರಾಜು, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ.ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್ ಹರೀಶ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande