ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ : ಮುಖ್ಯಮಂತ್ರಿ
ಪ್ರತಿ
Cm


ಕಲಬುರಗಿ, 12 ಜನವರಿ (ಹಿ.ಸ.) :

ಆ್ಯಂಕರ್ :ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂಬುದು ಪ್ರತಿ ಪಕ್ಷಗಳ ಸುಳ್ಳು ಅಪಪ್ರಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳಂತೆ ಒಂದೇ ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದುವರೆಗೆ ₹1.12 ಲಕ್ಷ ಕೋಟಿ ರೂ.ಗೂ ಅಧಿಕ ಅನುದಾನ ವೆಚ್ಚ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ಉಳಿದ ಭರವಸೆಗಳನ್ನು ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರವು 2018–23ರ ಅವಧಿಯಲ್ಲಿ ನೀಡಿದ್ದ 600 ಭರವಸೆಗಳಲ್ಲಿ ಶೇ.10ರಷ್ಟು ಮಾತ್ರ ಈಡೇರಿಸಿದೆ ಎಂದು ಟೀಕಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande