
ದಾವಣಗೆರೆ, 12 ಜನವರಿ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆದ 2025–26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಸಂಸದೆ ಪ್ರಭಾ ಮಲ್ಲಿಕಾರ್ಜುನ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಕುರಿತು ಸಮಗ್ರ ಚರ್ಚೆ ನಡೆಸಿ, ಯೋಜನೆಗಳನ್ನು ಸಮಯಬದ್ಧವಾಗಿ, ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಜಾರಿಗೊಳಿಸುವ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa