
ಕಲಬುರಗಿ, 12 ಜನವರಿ (ಹಿ.ಸ.) :
ಆ್ಯಂಕರ್ : ನೂತನವಾಗಿ ಘೋಷಿತ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕು ಹಾಗೂ ಜೇವರ್ಗಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟಾರೆ ₹906 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹತ್ತು ವರ್ಷಗಳೊಳಗೆ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಸಂಪೂರ್ಣವಾಗಿ ನಿವಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ 87 ಕಾಮಗಾರಿಗಳಿಗೆ ₹867.49 ಕೋಟಿ ವೆಚ್ಚದಲ್ಲಿ ಶಂಕುಸ್ಥಾಪನೆ ಹಾಗೂ ₹38.29 ಕೋಟಿ ವೆಚ್ಚದ ಕಾಮಗಾರಿಗಳಿಗೆ ಉದ್ಘಾಟನೆ ನಡೆಸಲಾಗಿದೆ. ಸರ್ಕಾರ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯದಲ್ಲಿ ಘೋಷಿತ ಹೊಸ ತಾಲ್ಲೂಕುಗಳಲ್ಲಿ ಬಿಜೆಪಿ ಸರ್ಕಾರ ಕೇವಲ 14 ತಾಲ್ಲೂಕುಗಳಿಗೆ ಮಾತ್ರ ಸೌಲಭ್ಯ ಒದಗಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಪ್ರಜಾಸೌಧ ಮಂಜೂರು ಮಾಡಿ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa