ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ
ವಿಜಯಪುರ, 12 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ, ಇಂಡಿ ಹಾಗೂ ಜಿಲ್ಲಾ ಹಾಪ್‍ಕಾಮ್ಸ್ ವಿಜಯಪುರ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಹತ್ತಿ
ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ


ವಿಜಯಪುರ, 12 ಜನವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ, ಇಂಡಿ ಹಾಗೂ ಜಿಲ್ಲಾ ಹಾಪ್‍ಕಾಮ್ಸ್ ವಿಜಯಪುರ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಹತ್ತಿರವಿರುವ ತೋಟಗಾರಿಕೆ ಕಚೇರಿ ಆವರಣದ ಬಸವ ವನದಲ್ಲಿ ಜ.13ರಿಂದ 15ರವರೆಗೆ ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಜ.13ರಂದು ಸಂಜೆ 4 ಗಂಟೆಗೆ ಪ್ರದರ್ಶನ-ಅಭಿಯಾನದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಫಲ-ಪುಷ್ಪ ಪ್ರದರ್ಶನವನ್ನು ಹಾಗೂ ತೋಟಗಾರಿಕೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಖಾತೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಹಣ್ಣು ಮತ್ತು ತರಕಾರಿ ಪ್ರದರ್ಶನ, ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರದ ಶಿವಾನಂದ ಎಸ್.ಪಾಟೀಲ ಅವರು ತರಕಾರಿಯಿಂದ ಸಿದ್ಧಪಡಿಸಿದ ಪ್ರದರ್ಶನ ಮಳಿಗೆ ಉದ್ಘಾಟಿಸಲಿದ್ದಾರೆ.

ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ ಪ್ರತಿ ದಿನ ಬೆಳಿಗ್ಗೆ 9-30 ರಿಂದ ರಾತ್ರಿ 8-30 ರವರೆಗೆ ಜರುಗಲಿದೆ.

ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಮತ್ತು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ರೈತರಿಗೆ ಲಿಂಬೆ, ದ್ರಾಕ್ಷಿ, ದಾಳಿಂಬೆ ಮತ್ತು ಡ್ರ್ಯಾಗನ್ ಬೆಳೆಗಳಲ್ಲಿ ಹವಾಮಾನ ಆಧಾರಿತ ಸಮಗ್ರ ಬೇಸಾಯ ಪದ್ಧತಿ, ಜೇನು ಸಾಕಾಣಿಕೆ ತರಬೇತಿ ಹಾಗೂ ತಾಳೆ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಕುರಿತು ಜ.13 ರಿಂದ 15 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದೆ.

ಜ.15 ರಂದು ಸಂಜೆ 6 ಗಂಟೆಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದ್ದು, ಪ್ರದರ್ಶನ ಅಂಗವಾಗಿ ಪ್ರತಿ ದಿನ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande