ಆರೋಗ್ಯ ತಪಾಸಣೆ ಉಚಿತ ಶಿಬಿರ
ವಿಜಯಪುರ, 12 ಜನವರಿ (ಹಿ.ಸ.) : ಆ್ಯಂಕರ್ : ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಬಿ.ಎಲ್.ಡಿ.ಇ ಆಸ್ಪತ್ರೆ ಅತ್ಯುತ್ತಮ ಸೇವೆ ಮಾಡುತ್ತಿದೆ ಎಂದು ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗೀಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ
ರಕ್ತದಾನ


ವಿಜಯಪುರ, 12 ಜನವರಿ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುವ ಮೂಲಕ ಬಿ.ಎಲ್.ಡಿ.ಇ ಆಸ್ಪತ್ರೆ ಅತ್ಯುತ್ತಮ ಸೇವೆ ಮಾಡುತ್ತಿದೆ ಎಂದು ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗೀಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆ ಮತ್ತು ಸರ್ವೋದಯ ಸಾಮಾಜಿಕ ಕ್ಷೇಮಾಭಿವೃದ್ಧಿ ಹಾಗೂ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಲಾದ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಉತ್ತಮ ಆರೋಗ್ಯ ಇಂದು ಮಹತ್ವದ್ದಾಗಿದೆ. ರಕ್ತದಾನ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ಅಲ್ಲದೇ, ರಕ್ತದ ಅಗತ್ಯವಿರುವ ರೋಗಿಗಳಿಗೆ ವರದಾನವಾಗುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ ರಕ್ತದಾನ ಮಾಡಿದ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಮತ್ತು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕುಮಾರ ಸಿ. ದೇಸಾಯಿ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆ ನಿರಂತರವಾಗಿ ಸಾಮಾಜಿಕ ಕಾಳಜಿಯೊಂದಿಗೆ ಎಷ್ಟೋ ಜನ ರೋಗಿಗಳ ಜೀವ ಉಳಿಸುವ ಕಾರ್ಯ ಮಾಡುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪರಿಸರ ಚಿಂತಕ ಡಾ. ಎಂ. ಆರ್. ದೇಸಾಯಿ ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ 400 ಕಿಂತಲೂ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 20 ಯುವಕರು ರಕ್ತದಾನ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande