ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರಕಾರದ ಗುರಿ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ, 12 ಜನವರಿ (ಹಿ.ಸ.) : ಆ್ಯಂಕರ್ : ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಕನಸಾಗಿದ್ದು, ಬಡ ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ
ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರಕಾರದ ಗುರಿ : ಸಚಿವ ಮಧು ಬಂಗಾರಪ್ಪ


ಶಿವಮೊಗ್ಗ, 12 ಜನವರಿ (ಹಿ.ಸ.) :

ಆ್ಯಂಕರ್ : ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಕನಸಾಗಿದ್ದು, ಬಡ ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗದ ವಿದ್ಯಾನಗರ ಹಾಗೂ ಗುತ್ಯಪ್ಪ ಕಾಲೋನಿಗಳಲ್ಲಿ ನೂತನ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 12 ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಹೊಳೆಹೊನ್ನೂರು, ಶಿಕಾರಿಪುರ ಹಾಗೂ ಆನವಟ್ಟಿಯಲ್ಲಿಯೂ ಶೀಘ್ರ ಆರಂಭಿಸಲಾಗುವುದು ಎಂದರು.

ಇಂದಿರಾ ಕ್ಯಾಂಟೀನ್‌ಗಳಿಂದ ಹಸಿದವರಿಗೆ ಅನ್ನ ಸಿಗಲಿದ್ದು, ಆರ್ಥಿಕವಾಗಿ ಹಿಂದುಳಿದವರಿಗೆ ದೊಡ್ಡ ನೆರವಾಗಲಿದೆ. ಆಹಾರದ ಗುಣಮಟ್ಟ ಕಾಪಾಡಬೇಕು ಎಂದು ಸೂಚಿಸಿದ ಅವರು, ಮೆಗ್ಗಾನ್ ಆಸ್ಪತ್ರೆ ಸುತ್ತಮುತ್ತ ಈ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.

ಜೊತೆಗೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಹೊಸ ಕಾಲೇಜುಗಳ ಆರಂಭ, ನಗರದಲ್ಲಿ ಹಕ್ಕುಪತ್ರ ವಿತರಣೆ ಸೇರಿದಂತೆ ಹಲವು ಜನಪರ ಯೋಜನೆಗಳ ಮಾಹಿತಿ ನೀಡಿದರು.

ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಯೋಜನೆಯನ್ನು ಶ್ಲಾಘಿಸಿದರು. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮುಂದಿನ 15 ದಿನಗಳಲ್ಲಿ ಉಳಿದ ಕ್ಯಾಂಟೀನ್‌ಗಳ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande