ಟ್ರಕ್ ಡಿಕ್ಕಿ ; ಒಂದೇ ಕುಟುಂಬದ ನಾಲ್ವರು ಯುವಕರು ಸಾವು
ಗರ್ವಾ, 12 ಜನವರಿ (ಹಿ.ಸ.) : ಆ್ಯಂಕರ್ : ಜಾರ್ಖಂಡ್ ನ ಗರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲ್ಚಂಪಾ ಗ್ರಾಮದ ಬಳಿ ಭಾನುವಾರ ತಡರಾತ್ರಿ ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದು, ಒಂದೇ ಕುಟುಂಬದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಶ್ಚಿತಾರ್ಥ ಸಮಾರಂಭದಿಂ
Accident


ಗರ್ವಾ, 12 ಜನವರಿ (ಹಿ.ಸ.) :

ಆ್ಯಂಕರ್ : ಜಾರ್ಖಂಡ್ ನ ಗರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲ್ಚಂಪಾ ಗ್ರಾಮದ ಬಳಿ ಭಾನುವಾರ ತಡರಾತ್ರಿ ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದು, ಒಂದೇ ಕುಟುಂಬದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಶ್ಚಿತಾರ್ಥ ಸಮಾರಂಭದಿಂದ ಹಿಂತಿರುಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಯಿಂದ ಸ್ಕಾರ್ಪಿಯೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿ, ಮೃತರ ದೇಹಗಳು ವಾಹನದೊಳಗೆ ಸಿಲುಕಿಕೊಂಡಿದ್ದವು. ಮಾಹಿತಿ ಪಡೆದ ಗರ್ವಾ ಪೊಲೀಸರು ಸ್ಥಳಕ್ಕೆ ಧಾವಿಸಿ, ಕಟ್ಟರ್ ಬಳಸಿ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಗರ್ವಾ ಸದರ್ ಆಸ್ಪತ್ರೆಗೆ ಕಳುಹಿಸಿದರು. ಅಪಘಾತದ ನಂತರ ಟ್ರಕ್ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಚಾಲಕನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande