ಅಭಿವೃದ್ಧಿಯ ಪಥದತ್ತ ಕಲಬುರಗಿ : ಡಿ.ಕೆ.ಶಿವಕುಮಾರ್
ಕಲಬುರಗಿ, 12 ಜನವರಿ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಯಡ್ರಾಮಿಯ ಕೆಪಿಎಸ್‌ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರಜಾಸೌಧಗಳ, ಕೆಪಿಎಸ್‌ ಶಾಲೆಗಳ ಹಾಗೂ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ, ಉದ
Dks


ಕಲಬುರಗಿ, 12 ಜನವರಿ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಯಡ್ರಾಮಿಯ ಕೆಪಿಎಸ್‌ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರಜಾಸೌಧಗಳ, ಕೆಪಿಎಸ್‌ ಶಾಲೆಗಳ ಹಾಗೂ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಅವರು ಕಲಬುರಗಿ ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ, ನುಡಿದಂತೆ ನಡೆಯುವ ನಮ್ಮ ಸರ್ಕಾರಕ್ಕೆ ಅಭಿವೃದ್ಧಿಯೇ ಮೊದಲ ಆದ್ಯತೆಯಾಗಿದೆ. ಎಂದರು.

ಕೆಕೆಆರ್‌ಡಿಬಿ ವತಿಯಿಂದ 200 ಕೆಪಿಎಸ್‌ ಶಾಲೆಗಳು ಹಾಗೂ ಶಿಕ್ಷಣ ಇಲಾಖೆಯಿಂದ 100 ಕೆಪಿಎಸ್‌ ಶಾಲೆಗಳನ್ನು ಅಂದಾಜು 600 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲು ಶಂಕುಸ್ಥಾಪನೆ ಮಾಡಲಾಯಿತು. ಜೊತೆಗೆ ಕಲ್ಯಾಣ ಕರ್ನಾಟಕದ ನೂತನ ತಾಲೂಕುಗಳಲ್ಲಿ 163.55 ಕೋಟಿ ರೂ. ವೆಚ್ಚದಲ್ಲಿ ನೂತನ ಪ್ರಜಾಸೌಧಗಳಿಗೂ ಅಡಿಗಲ್ಲು ಹಾಕಲಾಯಿತು.

ಜೇವರ್ಗಿ ಮತ್ತು ಯಡ್ರಾಮಿ ಅವಳಿ ತಾಲೂಕುಗಳ ಅಭಿವೃದ್ಧಿಗಾಗಿ ಸುಮಾರು 879.16 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟು 96 ಜನಪರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande