
ಬೆಂಗಳೂರು, 12 ಜನವರಿ (ಹಿ.ಸ.) :
ಆ್ಯಂಕರ್ : ಗಾಂಧೀನಗರ ವಿಧಾನಸಭಾ ಕ್ಷೇತ್ರದ ಅಂಬೇಡ್ಕರ್ ಕಾಲೋನಿಯಲ್ಲಿ ನಿವಾಸಿಗಳ ದೀರ್ಘಕಾಲದ ಬೇಡಿಕೆಯಾಗಿದ್ದ ಯುಜಿಡಿ ಮತ್ತು ಕಾಂಕ್ರೀಟ್ ರಸ್ತೆ ಕಾಮಗಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರವಾದ ಚರ್ಚೆ ನಡೆಸಿ, ನಿವಾಸಿಗಳ ಸಮಸ್ಯೆಗಳನ್ನು ಗಮನಿಸಿ, ಅವರ ಅಗತ್ಯಗಳಿಗೆ ಅನುಗುಣವಾಗಿ ಈ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಕಾಮಗಾರಿಗಳು ಪೂರ್ಣಗೊಂಡ ನಂತರ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಿಗೆ ಉತ್ತಮ ರಸ್ತೆ ಸೌಲಭ್ಯ, ಸರಿಯಾದ ಒಳಚರಂಡಿ ವ್ಯವಸ್ಥೆ ಸಿಗಲಿದ್ದು, ಪ್ರದೇಶದ ಒಟ್ಟಾರೆ ಜೀವನಮಟ್ಟ ಸುಧಾರಿಸಲಿದೆ. ಅಭಿವೃದ್ಧಿ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನದ ನಂತರ ಈ ಪ್ರದೇಶವು ಹೊಸ ರೂಪ ಪಡೆಯಲಿದೆ ಎಂದು ಸಚಿವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa