ನಾಳೆ ಮಕ್ಕಳ ರಕ್ಷಣೆ ಕುರಿತು ಒಂದು ದಿನದ ತರಬೇತಿ‌ ಕಾರ್ಯಾಗಾರ
ಚಿತ್ರದುರ್ಗ, 12 ಜನವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾ
ನಾಳೆ ಮಕ್ಕಳ ರಕ್ಷಣೆ ಕುರಿತು ಒಂದು ದಿನದ ತರಬೇತಿ‌ ಕಾರ್ಯಾಗಾರ


ಚಿತ್ರದುರ್ಗ, 12 ಜನವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ “ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಇದೇ ಜ.13ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್.ವಿಜಯಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಜೆ.ವೈಶಾಲಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ ಭಾಗವಹಿಸುವರು.

ಸಂಪನ್ಯೂಲ ವ್ಯಕ್ತಿಯಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಡಾ.ಕೆ.ರಾಘವೇಂದ್ರ ಭಟ್ ಭಾಗವಹಿಸುವರು.

ಚಿತ್ರದುರ್ಗ ಆಕಾಶವಾಣಿ ಸಂಪನ್ಮೂಲ ವ್ಯಕ್ತಿ ಡಾ.ನವೀನ್ ಮಸ್ಕಲ್ ನಿರೂಪಿಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಪ್ರೇಮಮೂರ್ತಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande