ವಿವೇಕಾನಂದ ಯುವಶಕ್ತಿ ವೀರ ಸನ್ಯಾಸಿ : ಶಾಸಕ ಚನ್ನಬಸಪ್ಪ
ಶಿವಮೊಗ್ಗ, 12 ಜನವರಿ (ಹಿ.ಸ.) : ಆ್ಯಂಕರ್ : ಶಿವಮೊಗ್ಗದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಸ್ವಾಮಿ ವಿವೇಕಾನಂದರನ್ನು ಯುವಶಕ್ತಿಯ ಪ್ರತೀಕ ಹಾಗೂ ವೀರ ಸನ್ಯಾಸಿ ಎಂದು ಬಣ್ಣಿಸಿದರು. ಯುವಜನತೆಗೆ ಪ್ರೇರಣೆಯಾದ ವಿವೇಕ
Vivekand jayanti


ಶಿವಮೊಗ್ಗ, 12 ಜನವರಿ (ಹಿ.ಸ.) :

ಆ್ಯಂಕರ್ : ಶಿವಮೊಗ್ಗದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಸ್ವಾಮಿ ವಿವೇಕಾನಂದರನ್ನು ಯುವಶಕ್ತಿಯ ಪ್ರತೀಕ ಹಾಗೂ ವೀರ ಸನ್ಯಾಸಿ ಎಂದು ಬಣ್ಣಿಸಿದರು.

ಯುವಜನತೆಗೆ ಪ್ರೇರಣೆಯಾದ ವಿವೇಕಾನಂದರ ಜೀವನ, ಚಿಂತನೆಗಳು ಹಾಗೂ ದೇಶಭಕ್ತಿ ಕುರಿತು ಅವರು ಮಾತನಾಡಿದರು.

ಚಿಕಾಗೋ ಧರ್ಮಸಮ್ಮೇಳನದ ಭಾಷಣದ ಮೂಲಕ ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿತ್ವವೆಂದು ಪ್ರಶಂಸಿಸಿದರು.

ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು, ಯುವಕರಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮತ್ತು ಮಾದಕ ವಸ್ತುಗಳಿಂದ ದೂರ ಇರಬೇಕೆಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಜೀವನೋತ್ಸಾಹ, ಕಲಿಕೆ, ಶಿಸ್ತು ಹಾಗೂ ಉತ್ತಮ ಮಾರ್ಗದರ್ಶನದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಐಎಎಸ್ ಹಾಗೂ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.

ಸೈಬರ್ ಕ್ರೈಮ್ ವಿಭಾಗದಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಯುವ ಸಪ್ತಾಹದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಾನಾ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande