
ಹಾಸನ, 12 ಜನವರಿ (ಹಿ.ಸ.) :
ಆ್ಯಂಕರ್ : ಸ್ವಾಮಿ ವಿವೇಕಾನಂದರು ನುಡಿದಂತೆ ನಡೆದು ತೋರಿಸಿದ ಮಹಾನ್ ಚೇತನರಾಗಿದ್ದು, ಭಾರತದ ಸನಾತನ ಸಂಸ್ಕೃತಿಯನ್ನು ಇಡೀ ವಿಶ್ವಕ್ಕೆ ಸಾರಿದ ವೀರ ಸನ್ಯಾಸಿ. ಅವರ ಜೀವನದ ಒಂದೊಂದು ಪ್ರಸಂಗವೂ ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದೆ ಎಂದು ಹಾಸನ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು ಅವರು ಹೇಳಿದರು.
ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್ ಹಾಗೂ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 163ನೇ ಜನ್ಮ ದಿನಾಚರಣೆ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರ ಆದರ್ಶಗಳೊಂದಿಗೆ ಆಯುರ್ವೇದ ಹಾಗೂ ಯೋಗದ ಮೂಲಕ ಆರೋಗ್ಯಕರ ಮತ್ತು ಸಾರ್ಥಕ ಜೀವನದ ಸಂದೇಶವನ್ನು ಯುವಕರು ಅಳವಡಿಸಿಕೊಳ್ಳಬೇಕು. “ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂಬ ಅವರ ನುಡಿಗಳು ಯುವಜನತೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
ಭಾರತೀಯ ಸಂಸ್ಕೃತಿ ಹಾಗೂ ಧರ್ಮವನ್ನು ವಿಶ್ವಕ್ಕೆ ಪರಿಚಯಿಸಿದ ಅವರ ಗ್ರಂಥಗಳನ್ನು ಯುವಕರು ಓದಿ ತಿಳಿಯಬೇಕೆಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa