ಗ್ಯಾರಂಟಿ ಯೋಜನೆಗಳಿಗೆ ₹1.10 ಲಕ್ಷ ಕೋಟಿ ವೆಚ್ಚ : ದಿನೇಶ್ ಗೂಳಿಗೌಡ
ಚಿತ್ರದುರ್ಗ, 12 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ₹1.10 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರ
ಗ್ಯಾರಂಟಿ ಯೋಜನೆಗಳಿಗೆ ₹1.10 ಲಕ್ಷ ಕೋಟಿ ವೆಚ್ಚ : ದಿನೇಶ್ ಗೂಳಿಗೌಡ


ಚಿತ್ರದುರ್ಗ, 12 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ₹1.10 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ₹293 ಕೋಟಿ ರೂ.ಗೂ ಅಧಿಕ ಅನುದಾನ ವೆಚ್ಚವಾಗಿದ್ದು, ಜನತೆಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು ಹಾಗೂ ಯುವಕರ ಬದುಕಿಗೆ ಆಸರೆಯಾಗಿದ್ದು, ನೇರ ಲಾಭ ವರ್ಗಾವಣೆಯಿಂದ ಪಾರದರ್ಶಕತೆ ಕಾಪಾಡಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಯೋಜನೆಗಳ ಕುರಿತು ವ್ಯಾಪಕ ಪ್ರಚಾರ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande