
ಬೆಂಗಳೂರು, 12 ಜನವರಿ (ಹಿ.ಸ.) :
ಆ್ಯಂಕರ್ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಯಾವುದೇ ಸಮಗ್ರ ಚರ್ಚೆಗೆ ಅವಕಾಶ ನೀಡದೆ ಅಂಗೀಕಾರ ಪಡೆದಿರುವ ದ್ವೇಷ ಭಾಷಣ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದೆಂದು ಕೋರಿ, ಬಿಜೆಪಿ ನಿಯೋಗವು ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು.
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಹೊರಟಿರುವ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಸಂವಿಧಾನದ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹದ್ದು ಎಂದು ನಿಯೋಗವು ರಾಜ್ಯಪಾಲರ ಗಮನಕ್ಕೆ ತಂದಿತು. ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೆ ಬರಬಾರದು ಎಂದು ಬಿಜೆಪಿ ಮುಖಂಡರು ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa