ಫಾಸ್ಟ್ ಫುಡ್ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು, 13 ಜನವರಿ (ಹಿ.ಸ.) : ಆ್ಯಂಕರ್ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ ಸೆಟ್‍ ಸಂಸ್ಥೆಯ ಫಾಸ್ಟ್ ಫುುಡ್ ತಯಾರಿಕೆ ಕುರಿತು 12 ದಿನಗಳ ಉಚಿತ ತರಬೇತಿಯನ್ನು ಫೆಬ್ರವರಿ 16, 2026 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾ
ಫಾಸ್ಟ್ ಫುಡ್ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ


ಬೆಂಗಳೂರು, 13 ಜನವರಿ (ಹಿ.ಸ.) :

ಆ್ಯಂಕರ್ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ ಸೆಟ್‍ ಸಂಸ್ಥೆಯ ಫಾಸ್ಟ್ ಫುುಡ್ ತಯಾರಿಕೆ ಕುರಿತು 12 ದಿನಗಳ ಉಚಿತ ತರಬೇತಿಯನ್ನು ಫೆಬ್ರವರಿ 16, 2026 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‍ ಕಾರ್ಡ್ ಹಾಗೂ ಆಧಾರ್‍ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ ಸೆಟ್‍ ಸಂಸ್ಥೆ, ಅರಿಶಿನಕುಂಟೆ , ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‍ ಸಂಖ್ಯೆ : 9481506564, 9740982585, 9380162042, 9241482541, 9113880324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಶಾಖೆ, ರುಡ್‍ ಸೆಟ್‍ ಸಂಸ್ಥೆೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande