
ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಾರುಲ್ ಉಲೂಮ್ ಸಬೀಲುರ್ ರಶಾದ್ ಸಂಸ್ಥೆಯ ಮುಖ್ಯಸ್ಥರಾದ, ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದರು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಜಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa