
ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್‌ನ ನಾಯಕತ್ವ ಗೊಂದಲದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಮೈಸೂರಿನಲ್ಲಿ ಭೇಟಿಯಾದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ಅಸಮರ್ಥವಾಗಿದೆ. ಯಾವುದೇ ನಿರ್ಧಾರ ಕೈಗೊಳ್ಳದಿರುವುದೇ ಅವರ ನೀತಿಯಾಗಿದೆ. ಗಡಿಯಾರ ಕೆಟ್ಟರೂ ದಿನಕ್ಕೆ ಎರಡು ಬಾರಿ ಸರಿಯಾದ ಸಮಯ ತೋರಿಸುತ್ತದೆ. ಆದರೆ ಈ ಭೇಟಿಯಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಟೀಕಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa