
ಮೈಸೂರು, 13 ಜನವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಲೋಕ ಸಭೆಯ ಪ್ರತಿ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು.
ರಾಹುಲ್ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲೇ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಬರಮಾಡಿಕೊಂಡು, ಹಸ್ತಲಾಘವ ನಡೆಸಿ ಕುಶಲೋಪರಿ ವಿಚಾರಿಸಿದರು.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa