
ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್‌ನಲ್ಲಿ ನಡೆದಿರುವ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಲೋಕ ಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿಗೆ ಆಗಮಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಭೆ ನಡೆಯುವ ಸಾಧ್ಯತೆಗಳಿವೆ.
ರಾಹುಲ್ ಗಾಂಧಿ ಮಧ್ಯಾಹ್ನ 2.20ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದು, ಬಳಿಕ ಹೆಲಿಕಾಪ್ಟರ್‌ನಲ್ಲಿ ಕೇರಳದ ವಯನಾಡಿಗೆ ತೆರಳಲಿದ್ದಾರೆ.
ಇದಕ್ಕೂ ಮುನ್ನ ಮಧ್ಯಾಹ್ನ 1.30ಕ್ಕೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಮೈಸೂರಿಗೆ ಆಗಮಿಸಿ, ರಾಹುಲ್ ಗಾಂಧಿ ಜೊತೆ ಸಭೆ ನಡೆಸಲಿದ್ದಾರೆ.
ಅಧಿಕಾರ ಹಸ್ತಾಂತರ ಹಾಗೂ ಸಂಪುಟ ಪುನಾರಚನೆ ಕುರಿತು ಪರಸ್ಪರ ಭಿನ್ನ ಸಂದೇಶಗಳು ಕೇಳಿ ಬರುತ್ತಿರುವ ಹೊತ್ತಿನಲ್ಲಿ ನಡೆಯುತ್ತಿರುವ ಈ ಸಭೆ ಮಹತ್ವ ಪಡೆದುಕೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa