
ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ಕೆಪಿಸಿಸಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ, ಮನರೇಗಾ ಬಚಾವ್ ಸಂಗ್ರಾಮ , ಬಿ.ಎಲ್.ಇ ಪಟ್ಟಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪೂರ್ವಸಿದ್ದತಾ ಸಭೆ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಸಿ.ಸುಧಾಕರ್, ಕೆ.ಹೆಚ್.ಮುನಿಯಪ್ಪ, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಸಚಿವರುಗಳು, ಹಾಲಿ ಶಾಸಕರು ಮತ್ತು ಸಂಸದರು ಸೇರಿ ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಹಲವು ಮುಖಂಡರುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa