
ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ಶಾಸಕರ ಭವನ ಕಟ್ಟಡದ 5ರ ಸಮ್ಮೇಳನ ಸಭಾಂಗಣದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಭರವಸೆ ಸಮಿತಿ ಸಭೆಯಲ್ಲಿ ಮಾಜಿ ಸಚಿವ ರಾಜಣ್ಣ ಅಧ್ಯಕ್ಷತೆ ವಹಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳು, ನರೇಗಾ ಯೋಜನೆಯಡಿ ಕೈಗೊಂಡ ಚೆಕ್ ಡ್ಯಾಮ್ ಕಾಮಗಾರಿಗಳು, ಯುಜಿಡಿ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆಗೆ ಸಂಬಂಧ ಪಟ್ಟಂತೆ ಭರವಸೆ ನೀಡಲಾಗಿರುವ ಯೋಜನೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನೆಡೆಸಿ ಪರಿಶೀಲನೆ ನಡೆಸಿದರು.
ಈ ಸಮಯದಲ್ಲಿ ಭರವಸೆ ಸಮಿತಿಯ ಸದ್ಯಸರು ಹಾಗೂ ಶಾಸಕರಾದ ಯು.ಬಿ.ಬಣಕಾರ್, ಅಲ್ಲಮಪ್ರಭು ಪಾಟೀಲ್, ಹೆಚ್.ಡಿ.ತಮ್ಮಯ್ಯ, ಟಿ.ಎಸ್. ಶ್ರೀ ವತ್ಸ, ಎಂ.ಆರ್ ಮಂಜುನಾಥ್ ರವರು, ಉದಯ ಗರುಡಾಚಾರ್, ಸಿ.ಕೆ.ರಾಮಮೂರ್ತಿ, ವಿಠ್ಠಲ್ ಸೋಮಣ್ಣ ಹಲಗೇಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ರಂದೀಪ್ ರವರು ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಭರವಸೆ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa