ಒಳಚರಂಡಿಗಳನ್ನು ಸ್ವಚ್ಛಗೊಳಿಸಲು ಜೆನ್‌ರೋಬೋಟಿಕ್ ಯಂತ್ರಗಳ ಬಳಕೆ
ಗದಗ, 13 ಜನವರಿ (ಹಿ.ಸ.) ಆ್ಯಂಕರ್: ಪೌರಕಾರ್ಮಿಕರಿಗೆ ಉಪಯೋಗವಾಗಲೆಂದು ನಿರ್ಮಿಸಿರುವ ಒಳಚರಂಡಿ ಸ್ವಚ್ಛತೆಯ ಯಂತ್ರದ ಪ್ರಾತ್ಯಕ್ಷಕತೆಯನ್ನು ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ
ಫೋಟೋ


ಗದಗ, 13 ಜನವರಿ (ಹಿ.ಸ.)

ಆ್ಯಂಕರ್:

ಪೌರಕಾರ್ಮಿಕರಿಗೆ ಉಪಯೋಗವಾಗಲೆಂದು ನಿರ್ಮಿಸಿರುವ ಒಳಚರಂಡಿ ಸ್ವಚ್ಛತೆಯ ಯಂತ್ರದ ಪ್ರಾತ್ಯಕ್ಷಕತೆಯನ್ನು ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಸಫಾಯಿ ಕರ್ಮಚಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಯುವರಾಜ ಬಳ್ಳಾರಿ, ರಮೇಶ್ ಮ್ಯಾಗೇರಿ, ಜಿಲ್ಲಾ ಸಂಯೋಜಕರಾದ ರಮೇಶ ಕೋಳೂರ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande