ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, 14 ಜನವರಿ (ಹಿ.ಸ.) : ಆ್ಯಂಕರ್ : ಅಜೀಂ ಪ್ರೇಂ ಜೀ ಫೌಂಡೇಶನ್‌ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ


ಶಿವಮೊಗ್ಗ, 14 ಜನವರಿ (ಹಿ.ಸ.) :

ಆ್ಯಂಕರ್ : ಅಜೀಂ ಪ್ರೇಂ ಜೀ ಫೌಂಡೇಶನ್‌ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯನ್ನು ಸರ್ಕಾರಿ ಶಾಲೆಯಲ್ಲಿ ಓದಿ ಪ್ರಸ್ತುತ ಪದವಿಯನ್ನು ಖಾಸಗಿ ಅಥವಾ ಸರ್ಕಾರಿ ಯಾವುದಾದರೂ ಕಾಲೇಜಿನಲ್ಲಿ ಓದುತ್ತಿರುವಂತಹ ಪದವಿ ಮೊದಲನೇ ವರ್ಷದ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇದಾಗಿದೆ.

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಜ.31 ಕಡೆಯ ದಿನವಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಇತರೆ ಹೆಚ್ಚಿನ ಮಾಹಿತಿಗಾಗಿ ಈ https://www.youtube.com/watch?v=dR0q9nozo-4, https://www.youtube.com/@azimpremjischolarship ಯೂಟ್ಯೂಬ್ ಲಿಂಕನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿ.ಪಂ.ಸಿಇಓ ಎನ್ ಹೇಮಂತ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande