
ಚಿತ್ರದುರ್ಗ, 14 ಜನವರಿ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ.
2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2024 ರಿಂದ 31.12.2024) ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಹಧನ ನೀಡಲು ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅದರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ https://sevasindu.karnataka.gov.in ಮೂಲಕ ಜ.31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಚಿತ್ರದುರ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa