
ಹುಬ್ಬಳ್ಳಿ, 14 ಜನವರಿ (ಹಿ.ಸ.) :
ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹುಬ್ಬಳ್ಳಿ ಇವುಗಳ ಸಹಯೋಗದಲ್ಲಿ ಜಿಲ್ಲೆಯ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ರ‌್ಯಾಂಪ್ (ಆರ್‌ಎಎಂಪಿ) ಯೋಜನೆಯಡಿ ಬಿಜಿನೆಸ್ ಡೆವಲಪ್‌ಮೆಂಟ್ ಸರ್ವಿಸ್ ಪ್ರೊವೈಡರ್ (ಬಿ.ಡಿ.ಎಸ್.ಪಿ) ಕಾರ್ಯಕ್ರಮವನ್ನು ಜನವರಿ 17ರಂದು ಬೆಳಿಗ್ಗೆ 10.30 ಕ್ಕೆ ಗೋಕುಲ ರಸ್ತೆಯ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಕೆ.ಎಸ್.ಎಫ್.ಸಿ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಮೇಶ್ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸತ್ಯನಾರಾಯಣ ಭಟ್ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಬಿಜಿನೆಸ್ ಡೆವಲಪ್‌ಮೆಂಟ್ ಸರ್ವಿಸ್ ಪ್ರೊವೈಡರ್ (ಬಿ.ಡಿ.ಎಸ್.ಪಿ) ಯೋಜನೆಯಡಿ ಲಭ್ಯವಿರುವ ನೆರವು ಕುರಿತು ತಜ್ಞರಿಂದ ಮಾರ್ಗದರ್ಶನ, ಉಪನ್ಯಾಸ ಹಾಗೂ ಸಂವಾದ ನಡೆಯಲಿದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು, ಕೈಗಾರಿಕಾ ಸಂಘಗಳ ಸದಸ್ಯರು, ಎಂ.ಎಸ್.ಎಂ.ಇ ವಲಯದ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸತ್ಯನಾರಾಯಣ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa