
ಗದಗ, 14 ಜನವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) ಯೋಜನೆ ಹಂತ 04ರ ಯೋಜನೆ ಅಡಿಯಲ್ಲಿ ಶಿರಹಟ್ಟಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕಚ್ಚಾ ಮನೆ ಅಥವಾ ಖಾಲಿ ನಿವೇಶನ ಹೊಂದಿದ ಬಡತನ ರೇಖೆಗಿಂತ ಕೆಳಗಿರುವ ಪರಿಶಷ್ಟ ಪಂಗಡ ಮಹಿಳಾ ಫಲಾನುಭವಿಗಳಿಗೆ ಪಕ್ಕಾ ಮನೆ ನಿರ್ಮಾಣ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಪಟ್ಟಣ ಪಂಚಾಯತಯಲ್ಲಿ ಅರ್ಜಿ ನಮೂನೆ ಪಡೆದು ಎಲ್ಲಾ ದಾಖಲೆಗಳೊಂದಿಗೆ ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯತ ಶಿರಹಟ್ಟಿ ನೀಡಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನೆವರಿ 19 ಆಗಿರುತ್ತದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿರಹಟ್ಟಿ ಪಟ್ಟಣ ಪಂಚಾಯತ್ ಕಾರ್ಯಾಲಯ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು: ಮತದಾರರ ಗುರುತಿನ ಚೀಟಿ, ಬಿಪಿಎಲ್ ರೇಶನ್ ಕಾರ್ಡ, ಬ್ಯಾಂಕ್ ಪಾಸ್ ಬುಕ್, ಆಧಾರ ಕಾರ್ಡ್, ಜಾತಿ/ ಆದಾಯ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಕಂಪ್ಯೂಟರ್ ಉತಾರ, 4 ಪಾಸ್ ಪೋರ್ಟ ಸೈಜ್ ಫೋಟೋ.
ಹಿಂದೂಸ್ತಾನ್ ಸಮಾಚಾರ್ / lalita MP