ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಅರ್ಥಪೂರ್ಣ ಆಚರಣೆ
ವಿಜಯಪುರ, 14 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾ
ಜಯಂತಿ


ವಿಜಯಪುರ, 14 ಜನವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ,ಗೌರವ ಸಲ್ಲಿಸಿದರು.

ಭವ್ಯ ಮೆರವಣಿಗೆ: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಚಾಲನೆ ನೀಡಿದರು.ಭವ್ಯ ಮೆರವಣಿಗೆಯು ಕಲಾ ತಂಡಗಳೊ0ದಿಗೆ ನಗರದ ವಿವಿಧ ವೃತ್ತಗಳ ಮೂಲಕ ಸಂಚರಿಸಿ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಮಾವೇಶಗೊಂಡಿತು.

ಈ ಸಂದರ್ಭದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ,ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ, ಸುರೇಶ ಚವಲರ, ರಾಮು ಹೊಸಪೇಟೆ, ಈರಪ್ಪ ಗೋಠೆ,ಕೃಷ್ಣ ಹಡಗಲಿ, ಬಾಲಚಂದ್ರ ಕಟ್ಟಿಮನಿ, ದಿಲೀಪ ಧೋತ್ರೆ, ಬಜರಂಗ ಬಾಂಡೆಕರ್, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೀರೇಕರ ಸೇರಿದಂತೆ ಸಮಾಜ ಮುಖಂಡರು, ವಿವಿಧ ಸಂಘ-ಸ0ಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande