
ಬೆಂಗಳೂರು, 14 ಜನವರಿ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳದ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ವಿಕಾಸಸೌಧ ಕಚೇರಿಯಲ್ಲಿ ಪೂರ್ವ ಸಿದ್ದತಾ ಸಭೆ ನಡೆಸಿದರು.
ಸಭೆಯಲ್ಲಿ ಮೇಳದ ಪೂರ್ವಭಾವಿ ಕಾರ್ಯಕ್ರಮಗಳ ಆಯೋಜನೆ ಹಾಗೂ ಮೇಳದ ಮೂರು ದಿನಗಳ ಶಿಷ್ಟಾಚಾರ ಸಹಿತ ವಿವಿಧ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಿದರು.
ಉತ್ಪಾದನೆಯನ್ನು ಮೀರಿದ ಕೃಷಿ ರೈತರ ಸಬಲೀಕರಣ ಎನ್ನುವ ಥೀಮ್ ಅಡಿಯಲ್ಲಿ ನಡೆಯಲಿರುವ ಈ ಮೇಳದಲ್ಲಿ ದೇಶ ವಿದೇಶದ ವಿಜ್ಞಾನಿಗಳು ,ತಜ್ಞರು, ಗಣ್ಯರು, ರೈತರು ಹಾಗೂ ಗ್ರಾಹಕರ ಸಹಿತ ಲಕ್ಷಾಂತರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಯು.ಪಿ.ಸಿಂಗ್, ಕೃಷಿ ಇಲಾಖೆನಿರ್ದೇಶಕ ಡಾ. ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮೊಹಮ್ಮದ ಪರವೇಜ ಬಂಥನಾಳ, ಸೆಕಂಡರಿ ಅಗ್ರಿಕಲ್ಚರಲ್ ನಿರ್ದೇಶಕ ವೆಂಕಟರಮಣ ರೆಡ್ಡಿ, ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ಇತರ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa