ರಸಗೊಬ್ಬರ ಮಾರಾಟ ಪರವಾನಿಗೆ ವಿತರಣೆ
ತುಮಕೂರು, 14 ಜನವರಿ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ರಸಗೊಬ್ಬರ ಮಾರಾಟ ಪರವಾನಿಗೆ ವಿತರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಾಜಣ್ಣ ಅವರು ಪರವಾನಿಗೆಗಳನ್ನು
Distribute


ತುಮಕೂರು, 14 ಜನವರಿ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ರಸಗೊಬ್ಬರ ಮಾರಾಟ ಪರವಾನಿಗೆ ವಿತರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಾಜಣ್ಣ ಅವರು ಪರವಾನಿಗೆಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲಾ ರೈತರಿಗೆ ಪೂರಕವಾಗುವಂತೆ ಸಂಘಗಳು ತಮ್ಮ ಕಾರ್ಯಚಟುವಟಿಕೆಗಳನ್ನು ರೂಪಿಸಬೇಕು. ಯಾವುದೇ ರೀತಿಯ ಸೌಲಭ್ಯಗಳು ಕುಂಟಿತವಾಗದಂತೆ ಸೂಕ್ತ ತೀರ್ಮಾನಗಳನ್ನು ಕೈಗೊಂಡು, ರೈತ ಸ್ನೇಹಿಯಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande