ಕಾರ್ಮಿಕ ಇಲಾಖೆ ಕಾರ್ಯಾಚರಣೆ, 04 ಕಿಶೋರ ಕಾರ್ಮಿಕರ ಪತ್ತೆ
ಶಿವಮೊಗ್ಗ, 14 ಜನವರಿ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಅನಿರೀಕ್ಷಿತ ತಪಾಸಣೆಯನ್ನು ಹಮ್ಮಿಕೊಳ್ಳಲ
Child labor


ಶಿವಮೊಗ್ಗ, 14 ಜನವರಿ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಅನಿರೀಕ್ಷಿತ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು, 04 ಕಿಶೋರ ಕಾರ್ಮಿಕರು ಪತ್ತೆಯಾಗಿರುತ್ತಾರೆ. ಈ ಕಿಶೋರಾ ಕಾರ್ಮಿಕರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿಕಾಯ್ದೆ 2016ರಡಿ ಶಿವಮೊಗ್ಗ ನಗರದ ತೀರ್ಥಹಳ್ಳಿ ರಸ್ತೆ, ಬೈಪಾಸ್, ನ್ಯೂ ಮಂಡ್ಲಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಆಟೋವಕ್ಸ್, ಬೀದಿ ಬದಿ ವ್ಯಾಪಾರಿಗಳಿಗೆ, ಬಾಲ ಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು. ಈ ತಪಾಸಣೆಯಲ್ಲಿ ಕೃಷ್ಣ ಎಂ. ಕಾರ್ಮಿಕ ನಿರೀಕ್ಷಕರು, ಶಿವಮೊಗ್ಗ, ರಘುನಾಥ ಎ.ಎಸ್. ಯೋಜನಾ ನಿರ್ದೇಶಕರು, ಲಕ್ಷಣ್, ಪೊಲೀಸ್ ಇಲಾಖೆ ಮತ್ತು ಪುನೀತ್ ಜಿಲ್ಲಾ ಮಕ್ಕಳ ರಕ್ಷಣಾಘಟಕ, ರಾಮಪ್ಪ ಶಿಕ್ಷಕರು ಈ ತಂಡದಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande