ರಾಯಚೂರು ಜಿಲ್ಲಾ ಉತ್ಸವ : ಹೆಲಿಕ್ಯಾಪ್ಟರ್ ರೈಡ್ ಆಯೋಜನೆ
ರಾಯಚೂರು, 14 ಜನವರಿ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026 ಅಂಗವಾಗಿ, ರಾಯಚೂರು ಜಿಲ್ಲೆಯ ನಾಗರಿಕರಿಗೆ ಬಾನಂಗಳದಿಂದ ರಾಯಚೂರು ನಗರವನ್ನು ವೀಕ್
Heli ride


ರಾಯಚೂರು, 14 ಜನವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026 ಅಂಗವಾಗಿ, ರಾಯಚೂರು ಜಿಲ್ಲೆಯ ನಾಗರಿಕರಿಗೆ ಬಾನಂಗಳದಿಂದ ರಾಯಚೂರು ನಗರವನ್ನು ವೀಕ್ಷಿಸುವ ವಿಶೇಷ ‘ರಾಯಚೂರು ಭೈಸ್ಕೈ’ ಹೆಲಿಕ್ಯಾಪ್ಟರ್ ರೈಡ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಕಾರ್ಯಕ್ರಮವು ಜನವರಿ 26 ರಿಂದ 31, 2026ರವರೆಗೆ ನಡೆಯಲಿದ್ದು, ಜಿಲ್ಲೆಯ ನಾಗರಿಕರಿಗೆ ಅಪರೂಪದ ಅನುಭವವನ್ನು ನೀಡಲಿದೆ.

ಹೆಲಿಕ್ಯಾಪ್ಟರ್ ರೈಡ್ ಕಾರ್ಯಕ್ರಮವು ರಾಯಚೂರು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಉತ್ಸವದ ಅಂಗವಾಗಿ ಪ್ರವಾಸೋದ್ಯಮ ಮತ್ತು ಜಿಲ್ಲೆಯ ವೈಶಿಷ್ಟ್ಯತೆಗಳನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ನಾಗರಿಕರಿಗೆ ಅಗತ್ಯ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಪ್ರಕಟಿಸುವುದಾಗಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande