
ಶಿವಮೊಗ್ಗ, 14 ಜನವರಿ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ನೇತ್ರ ಸಹಾಯಕರ 5 ಹುದ್ದೆಗೆ 2ನೇ ಹಂತದಲ್ಲಿ ಅಂತಿಮವಾಗಿ ಆಯ್ಕೆಯಾದವರ ಹಾಗೂ ಆಯ್ಕೆಯಾಗದವರ ಪಟ್ಟಿಯನ್ನು ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಜ. 21 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ , ದೂ.ಸಂ.: 8197094440/ 9481691580/ 08182-222382 ಗಳನ್ನು ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa