ಬೆಜ್ಜವಳ್ಳಿಯ ಅಯ್ಯಪ್ಪ ದೇವಸ್ಥಾನದಲ್ಲಿ ಶಿವರಾಜಕುಮಾರ ಪೂಜೆ
ಶಿವಮೊಗ್ಗ, 14 ಜನವರಿ (ಹಿ.ಸ.) : ಆ್ಯಂಕರ್ : ಮಕರ ಸಂಕ್ರಾಂತಿ ಅಂಗವಾಗಿ “ಕರ್ನಾಟಕದ ಶಬರಿಮಲೆ” ಎಂದೇ ಪ್ರಸಿದ್ಧಿ ಪಡೆದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆದ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ
Shivrajkumar


ಶಿವಮೊಗ್ಗ, 14 ಜನವರಿ (ಹಿ.ಸ.) :

ಆ್ಯಂಕರ್ : ಮಕರ ಸಂಕ್ರಾಂತಿ ಅಂಗವಾಗಿ “ಕರ್ನಾಟಕದ ಶಬರಿಮಲೆ” ಎಂದೇ ಪ್ರಸಿದ್ಧಿ ಪಡೆದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆದ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರು ಪತ್ನಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ಪಾಲ್ಗೊಂಡರು.

ಈ ಸಂದರ್ಭದಲ್ಲಿ ದಂಪತಿ ಮಾಲೆ ಧರಿಸಿ, ಇರುಮುಡಿ ಕಟ್ಟಿ ಪವಿತ್ರ ಭಕ್ತಿಭಾವದಿಂದ ದೇವಸ್ಥಾನಕ್ಕೆ ತೆರಳಿ, ಶ್ರೀ ಅಯ್ಯಪ್ಪಸ್ವಾಮಿಯ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಯ್ಯಪ್ಪಸ್ವಾಮಿಯ ಆಶೀರ್ವಾದ ಪಡೆದ ಶಿವಣ್ಣ ದಂಪತಿ ಭಕ್ತರೊಂದಿಗೆ ಸಂಕ್ರಾಂತಿ ಉತ್ಸವದ ಸಂಭ್ರಮದಲ್ಲಿ ಭಾಗಿಯಾದರು.

ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆಗಳು ಹಾಗೂ ಭಕ್ತಿಗೀತ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು. ಶಿವಣ್ಣ ಅವರ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ದೇವಾಲಯ ಆವರಣ ಭಕ್ತಿಭಾವದಿಂದ ಕಂಗೊಳಿಸಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande