ವಿದ್ಯಾರ್ಥಿ ಚೇತನ ; ಆಯುಷ್ ಸೇವಾ ಕಾರ್ಯಕ್ರಮ ಉದ್ಘಾಟನೆ
ಚಿತ್ರದುರ್ಗ, 14 ಜನವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗದ ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ (ಪರಿಶಿಷ್ಟ ಪಂಗಡ) ಯಲ್ಲಿ ಮಂಗಳವಾರ ವಿದ್ಯಾರ್ಥಿ ಚೇತನ-ಆಯುಷ್ ಸೇವಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಾಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮು
ವಿದ್ಯಾರ್ಥಿ ಚೇತನ ; ಆಯುಷ್ ಸೇವಾ ಕಾರ್ಯಕ್ರಮ ಉದ್ಘಾಟನೆ


ಚಿತ್ರದುರ್ಗ, 14 ಜನವರಿ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗದ ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ (ಪರಿಶಿಷ್ಟ ಪಂಗಡ) ಯಲ್ಲಿ ಮಂಗಳವಾರ ವಿದ್ಯಾರ್ಥಿ ಚೇತನ-ಆಯುಷ್ ಸೇವಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಾಯಿತು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಅವರು ಔಷಧಿ ಸಸ್ಯಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿ ಚೇತನ ಕಾರ್ಯಕ್ರಮದ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ನೀಡುವ ಸೇವೆಗಳು ಮತ್ತು ಆಯುಷ್ ಇಲಾಖೆಯಲ್ಲಿ ದೊರೆಯಬಹುದಾದ ಇತರ ಸೇವೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಹಾಗೂ ಆಯುಷ್ ಕೈಪಿಡಿ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಆಯುಷ್ ಇಲಾಖೆಯ ಡಾ.ಬೊಮ್ಮಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಆಯುಷ್ ಪದ್ಧತಿಗಳ ಬಗ್ಗೆ ವಿವರವಾಗಿ ಹಾಗೂ ಇಲಾಖೆ ಬಗ್ಗೆ ಮಾಹಿತಿಗಳನ್ನು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಇರುವ ಚಿಕಿತ್ಸಾಲಯಗಳು, ಆಸ್ಪತ್ರೆಗಳು ಮತ್ತು ಜಿಲ್ಲಾ ಆಸ್ಪತ್ರೆಯ ಬಗ್ಗೆ ಮಾಹಿತಿ ನೀಡಿದರು.

ವಸತಿ ಶಾಲೆಯ ಪ್ರಾಂಶುಪಾಲ ರೇವಣಸಿದ್ದೇಶ್ವರ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಚೇತನ ಕಾರ್ಯಕ್ರಮ ಒಂದು ಉತ್ತಮವಾದ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಸಂಪೂರ್ಣ ಉಪಯೋಗ ಪಡೆದುಕೊಂಡು ಆರೋಗ್ಯವಂತ ಜೀವನಶೈಲಿ ಅಳವಡಿಸಿಕೊಳ್ಳಲು ತಿಳಿಸಿದರು.

ಆಯುಷ್ ಇಲಾಖೆಯ ಡಾ.ಆರ್.ಡಿ. ಚನ್ನಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಚೇತನ ಕಾರ್ಯಕ್ರಮದ ರೂಪರೇಷೆಗಳು ಹಾಗೂ ಇದರಲ್ಲಿ ಇರುವ ಕಾರ್ಯಕ್ರಮಗಳ ಪಟ್ಟಿ ತಿಳಿಸಿದರು.

ವಸತಿ ಶಾಲೆಯ ಉಪ ಪ್ರಾಂಶುಪಾಲ ಅನಿಲ್ ಮತ್ತು ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande