ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳ ಸಮೀಕ್ಷೆ
ಗದಗ, 14 ಜನವರಿ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳ ಸಮೀಕ್ಷೆಗಾಗಿ ಸರಕಾರ ಹಿಂಗಾರು ರೈತರ ಬೆಳೆ ಸಮೀಕ್ಷೆ-25 ಆಪ್ ಬಿಡುಗಡೆ ಮಾಡಿದ್ದು, ಆರಂಭದಲ್ಲೆ ಸಮೀಕ್ಷೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜನೇವರಿ 2 ರಿಂದ 12 ರ ವರೆಗೆ 1,08,5
ಫೋಟೋ


ಗದಗ, 14 ಜನವರಿ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳ ಸಮೀಕ್ಷೆಗಾಗಿ ಸರಕಾರ ಹಿಂಗಾರು ರೈತರ ಬೆಳೆ ಸಮೀಕ್ಷೆ-25 ಆಪ್ ಬಿಡುಗಡೆ ಮಾಡಿದ್ದು, ಆರಂಭದಲ್ಲೆ ಸಮೀಕ್ಷೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜನೇವರಿ 2 ರಿಂದ 12 ರ ವರೆಗೆ 1,08,508 ತಾಕುಗಳ್ನು (ಶೇ. 31) ರೈತರು ಸಮೀಕ್ಷೆ ಕೈಗೊಂಡಿದ್ದಾರೆ.

2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 3.16 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷ ನಡೆಸುವಂತೆ ಸರಕಾರ ಗುರಿ ನೀಡಿತ್ತು, ಈ ಪೈಕಿ 3.15 ಲಕ್ಷ ತಾಕುಗಳಲ್ಲಿ ಸಮೀಕ್ಷೆ ಮಾಡಲಾಗಿ, ಶೇ. 99.68 ಸಾಧನೆ ಮಾಡಲಾಗಿತ್ತು.

2025-26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ 2.53 ಲಕ್ಷ ಹೆ. ಪ್ರದೇಶದಲ್ಲಿ ರೈತರು ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. 3.19 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆಗೆ ಗುರಿ ನಿಗದಿಪಡಿಸಲಾಗಿದ್ದು, ಜನೇವರಿ 31 ವರೆಗೆ ಸಮೀಕ್ಷೆ ಕೈಗೊಳ್ಳಲು ಅವಕಾಶವಿದೆ.

ರೈತರೇ ಮಾಡಬಹುದು: ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಆಪ್ನಲ್ಲಿ ಛಾಯಾಚಿತ್ರ ಸಹಿತವಾಗಿ ಅಪ್ಲೋಡ್ ಮಾಡುವ ಉದ್ದೇಶದಿಂದ ಸಮೀಕ್ಷೆ ಆರಂಭಿಸಿದ್ದೆವೆ. ರೈತರಿಗೆ ನೇರವಾಗಿ ಮಾಹಿತಿ ಅಪ್ಲೋಡ್ ಮಾಡಲು ಸಾಧ್ಯವಾಗದಿದ್ದರೆ, ಖಾಸಗಿ ನೀವಾಸಿಗಳು ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿದ್ದೆವೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನರ‍್ದೇಶಕಿ ಶ್ರೀಮತಿ ಚೇತನಾ ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ರೈತರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಸರಕಾರಕ್ಕೆ ನಿಖರವಾದ ದತ್ತಾಂಶ ಸಿಗುತ್ತದೆ. ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗುತ್ತದೆ. ಜತೆಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿ ನೋಂದಣಿ, ಬೆಳೆ ವಿಮೆ ಯೋಜನೆಯಡಿ ತಾಕುವಾರಿ ಬೆಳೆ ಪರೀಶಿಲನೆ, ಬೆಳೆ ಸಾಲ ಪಡೆಯಲು ಮತ್ತು ಬೆಳೆ ಹಾನಿ ಪರಿಶೀಲನೆಗೆ ಸಹಾಯವಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande