
ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ : ಗೋಲ್ಡನ್‌ಕ್ವೀನ್ ಅಮೂಲ್ಯ ಮತ್ತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆ ಬಳಿಕ ಸಿನಿಮಾರಂಗದಿಂದ ದೂರ ಸರಿದಿದ್ದ ಅಮೂಲ್ಯ ಬರೋಬ್ಬರಿ 8 ವರ್ಷಗಳ ಬಳಿಕ ಪೀಕಬೂ ಸಿನಿಮಾ ಮೂಲಕ ವಾಪಾಸ್ ಆಗಿದ್ದಾರೆ.
ಮಂಜು ಸ್ವರಾಜ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಅಮೂಲ್ಯಾ ಲುಕ್ ಟೀಸರ್ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು..ಅಮೂಲ್ಯ ಟೀಸರ್ ನಂತ್ರ ಚಿತ್ರಕ್ಕೆ ನಾಯಕ ಯಾರಾಗುತ್ತಾರೆ ಎನ್ನುವ ಕುತೂಹಲ ಇತ್ತು. ಇದೀಗ ಆ ಕುತೂಹಲಕ್ಕೂ ತೆರೆ ಬಿದ್ದಿದೆ.
ನಟಿ ಅಮೂಲ್ಯಾಗೆ ಜೋಡಿಯಾಗಿ ನಟ ಶ್ರೀರಾಮ್ ಕಾಣಿಸಿಕೊಳ್ಳುತ್ತಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲಿಯೂ ಖ್ಯಾತಿಗಳಿಸಿರುವ ಶ್ರೀರಾಮ್ ಇದೀಗ ಪೀಕಬೂ ಸಿನಿಮಾ ಮೂಲಕ ಮತ್ತೆ ದೊಡ್ಡ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. 2008 ರಲ್ಲಿ ರಿಷಭಪ್ರಿಯ ಎಂಬ ಕಿರುಚಿತ್ರದ ಮೂಲಕ ನಾಯಕ ನಟನಾಗಿ ಎಂಟ್ರಿ ಕೊಟ್ಟ ಶ್ರೀರಾಮ್, ಬಳಿಕ ಧಾರಾವಾಹಿಯಲ್ಲಿ ಬ್ಯುಸಿಯಾದರು.
ನಂತರ ಇರುವುದೆಲ್ಲವ ಬಿಟ್ಟು ಸಿನಿಮಾ ಮೂಲಕ ನಾಯಕನಾಗಿ ದೊಡ್ಡ ಪರದೆ ಮೇಲೆ ಮಿಂಚಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ರು. ಬಳಿಕ ಗಜಾನನ ಅಂಡ್ ಗ್ಯಾಂಗ್, ಹೊಂದಿಸಿ ಬರೆಯಿರಿ ಸಿನಿಮಾಗಳಲ್ಲಿ ನಟಿಸಿದ್ದರು. ಇದೀಗ ಶ್ರೀರಾಮ್ ಅಮೂಲ್ಯ ಜೊತೆ ಪೀಕಬೂ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಸದ್ಯ ಪೀಕಬೂ ಸಿನಿಮಾದ ಹೀರೋ ರಿವಿಲ್ ಟೀಸರ್ ರಿಲೀಸ್ ಆಗಿದ್ದು ಟೀಸರ್ ಇಂಟ್ರೆಸ್ಟಿಂಗ್ ಆಗಿದೆ..ಶ್ರೀರಾಮ್ ಟೀಸರ್ ನಲ್ಲಿ ಎರಡು ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ..ಅಮೂಲ್ಯ ಹಾಗೂ ಶ್ರೀರಾಮ್ ನ್ಯೂ ಕಾಂಬಿನೇಷನ್ ಆಗಿದ್ದು ಮೊದಲ ಬಾರಿಗೆ ಇಬ್ಬರು ಒಟ್ಟಿಗೆ ಅಭಿನಯ ಮಾಡುತ್ತಿದ್ದಾರೆ…
ಪೀಕಬೂ ಎಂದರೆ ಮಕ್ಕಳನ್ನ ನಗಿಸಲು ಬಳಸುವ ಪದವಾಗಿದೆ.. ಒಂದೊಳ್ಳೆ ಮೆಸೇಜ್ ಜೊತೆಗೆ ಕಮರ್ಷಿಯಲ್ ಎಲಿಮೆಂಟ್ಸ್ ಈ ಸಿನಿಮಾದಲ್ಲಿ ಇರಲಿದೆ.. ಸದ್ಯ ಪೀಕಬೂ ಚಿತ್ರದ ಅರ್ಧದಷ್ಟು ಭಾಗ ಶೂಟಿಂಗ್ ಮುಗಿಸಿದೆ.
ಚಿತ್ರಕ್ಕೆ ಸುರೇಶ್ ಬಾಬು ಸಿನಿಮಾಟೋಗ್ರಾಫರ್ ಆಗಿದ್ದು . ವೀರ್ ಸಮರ್ಥ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶ್ರಾವಣಿ ಸುಬ್ರಮಣ್ಯ ಸಿನಿಮಾದ ನಂತ್ರ ಮತ್ತೆ ಅಮೂಲ್ಯ ಅವರಿಗೆ ಆಕ್ಷನ್ ಕಟ್ ಹೇಳ್ತಿದ್ದಾರೆ ನಿರ್ದೇಶಕ ಮಂಜು ಸ್ವರಾಜ್ ಶ್ರೀ ಕೆಂಚಾಂಬಾ ಫಿಲಂಸ್ ಅಡಿಯಲ್ಲಿ ಗಣೇಶ್ ಕೆಂಚಾಂಬಾ ಪೀಕಾಬೂ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa