6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ
ಚಿತ್ರದುರ್ಗ, 15 ಜನವರಿ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರ
6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ


ಚಿತ್ರದುರ್ಗ, 15 ಜನವರಿ (ಹಿ.ಸ.) :

ಆ್ಯಂಕರ್ : 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಫೆಬ್ರವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಸೇವಾಸಿಂಧು ವೆಬ್‍ಸೈಟ್ https://sevasindhuservices.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande