
ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ : ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪುಂಗಿ ಊದಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು, ಇದೀಗ ನೆನಪಾದಾಗಲೆಲ್ಲ ವಿದ್ಯುತ್ ದರ ಏರಿಕೆ ಮಾಡುತ್ತಾ ಜನಸಾಮಾನ್ಯರಿಗೆ ಭಾರಿ ಹೊರೆ ಹಾಕುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸ್ಮಾರ್ಟ್ ಮೀಟರ್ ಎಂಬ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿರುವ ಸರ್ಕಾರ, ಈಗಾಗಲೇ ಹಲವು ಸುತ್ತು ವಿದ್ಯುತ್ ದರವನ್ನು ಏರಿಕೆ ಮಾಡಿದ್ದರೂ ತೃಪ್ತಿಯಾಗದೆ ಮತ್ತೊಮ್ಮೆ ದರ ಏರಿಕೆಗೆ ಮುಂದಾಗಿರುವುದು ಜನವಿರೋಧಿ ಕ್ರಮವಾಗಿದೆ ಎಂದು ಬಿಜೆಪಿ ಹೇಳಿದೆ.
‘ಉಚಿತ ವಿದ್ಯುತ್’ ಎಂಬ ಹೆಸರಿನಲ್ಲಿ ಜನರನ್ನು ಮರುಳು ಮಾಡಿದ ಕಾಂಗ್ರೆಸ್ ಸರ್ಕಾರ, ವಾಸ್ತವದಲ್ಲಿ ಜನಸಾಮಾನ್ಯರ ಕಿಸೆಯಿಂದ ದುಪ್ಪಟ್ಟು ಹಣವನ್ನು ಲೂಟಿ ಹೊಡೆಯುತ್ತಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಸಣ್ಣ ಉದ್ಯಮಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಟೀಕಿಸಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ದರ ಏರಿಕೆ ನೀತಿ ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದ್ದು, ಬೆಲೆ ಏರಿಕೆಯ ಬೆಂಕಿಗೆ ಇನ್ನಷ್ಟು ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ. ಜನರ ಸಹನೆಯನ್ನು ಪರೀಕ್ಷಿಸುವ ಈ ರೀತಿಯ ಆಡಳಿತಕ್ಕೆ ರಾಜ್ಯದ ಜನರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಎಚ್ಚರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa