
ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಒಂದಲ್ಲಾ ಒಂದು ರೀತಿಯಲ್ಲಿ ರಾಜ್ಯದ ಜನರನ್ನು ಕಣ್ಣೀರು ಹಾಕಿಸುವ ಕೆಲಸ ಮಾಡುತ್ತಲೇ ಬಂದಿದೆ. ಆಡಳಿತಕ್ಕೆ ಬಂದು ಎರಡುವರೆ ವರ್ಷಗಳಾದರೂ, ವಿಪಕ್ಷಗಳು ಬೀದಿಗಿಳಿದು ಎಚ್ಚರಿಸಿದರೂ ಸರ್ಕಾರ ತನ್ನ ಜನವಿರೋಧಿ ನಡೆ ತಿದ್ದುಕೊಳ್ಳದೆ ಅದೇ ಚಾಳಿಯನ್ನು ಮುಂದುವರೆಸುತ್ತಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿದೆ.
ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಮತ್ತು ದುಶಾಸನದಿಂದ ನಾಡಿನ ವಿವಿಧ ವರ್ಗಗಳ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಸರ್ಕಾರಕ್ಕೆ ಜನರ ಕಣ್ಣೀರಿನ ಶಾಪ ತಟ್ಟದೇ ಇರದು ಎಂದು ಬಿಜೆಪಿ ಎಚ್ಚರಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa